ಶಿರಾ, ಆರ್.ಆರ್ ನಗರ ಉಪಚುನಾವಣೆ: 1 ಗಂಟೆ ವರೆಗೆ ಆದ ವೋಟಿಂಗ್ ಪ್ರಮಾಣ

ಬೆಂಗಳೂರು: ನಗರದ ಆರ್.ಆರ್ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ಮಂಗಳವಾರ ಭರದಿಂದ ಸಾಗಿದೆ.
ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಸಂಜೆ 6 ಗಂಟೆ ವರೆಗೆ ತನಕ ಮತದಾನ ನಡೆಯಲಿದೆ.
ಈವರಗೂ ಈ ಎರಡು ಕ್ಷೇತ್ರಗಳಲ್ಲಿ ಆಗಿರುವ ಮತದಾನ ಪ್ರಮಾಣ ಹೀಗಿದೆ.
ಶಿರಾ ಕ್ಷೇತ್ರದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ. 44ರಷ್ಟು ಮತದಾನ ನಡೆದಿದೆ. ಹಾಗೆಯೇ ಆರ್. ಆರ್. ನಗರ ಕ್ಷೇತ್ರದಲ್ಲಿ ಕೇವಲ 27ರಷ್ಟು ಮತದಾನವಾಗಿದೆ.
ಶಿರಾದಲ್ಲಿ ಕಾಂಗ್ರೆಸ್ ನಿಂದ ಟಿ.ಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ ಹಾಗೂ ಜೆಡಿಎಸ್ ನ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದಾರೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕುಸುಮಾ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್ ನಿಂದ ಕೃಷ್ಣಮೂರ್ತಿ ಸ್ಪರ್ಧಾ ಕಣದಲ್ಲಿದ್ದಾರೆ.