ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ. 24 ರಂದು ಜಾಮೀನು ಆದೇಶವನ್ನ ಕಾಯ್ದಿರಿಸಿತ್ತು.
ನ್ಯಾಯಾಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಅವರು ನಟಿಯರಿಬ್ಬರಿಗೂ ಜಾಮೀನು ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದ್ದಾರೆ.
ಪ್ರಕರಣ ಸಂಬಂಧ ನಟಿಯರಾದ ರಾಗಿಣಿ ಮತ್ತು ಸಂಜನಾ ಕಳೆದ ಒಂದೂವರೆ ತಿಂಗಳಿನಿಂದ ಪರಪ್ಪನ ಅಗ್ರಹಾರ ಜೇಲಿನಲ್ಲಿದ್ದಾರೆ.

