ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಬಂಧನ

ಮುಂಬೈ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರ ಸಿಐಡಿ ಪೆÇಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬುಧವಾರ ಬೆಳಿಗ್ಗೆ ಬಂಧಿಸಿದ್ದಾರೆ.
2018ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಅರ್ನಾಬ್‍ನನ್ನು ಬಂಧಿಸಲಾಗಿದೆ.
ಮೇ 2018 ರಲ್ಲಿ ಅಲಿಬಾಗ್‍ನ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದರು.
ಅರ್ನಾಬ್ ಗೋಸ್ವಾಮಿ ಸೇರಿದಂತೆ ಇನ್ನಿಬ್ಬರು ಅನ್ವಯ್ ನಾಯಕ್‍ಗೆ ಸೇರಬೇಕಿದ್ದ 5.40 ಕೋಟಿ ರೂಪಾಯಿಗಳನ್ನು ಪಾವತಿಸದೆ ಇರುವುದರಿಂದ ಅವರು ಆರ್ಥಿಕ ತೊಂದರೆಗೆ ಈಡಾಗಿದ್ದರು ಎಂದು ಅನ್ವಯ್ ನಾಯಕ್ ತಮ್ಮ ಸೂಸೈಡ್ ನೋಟ್‍ನಲ್ಲಿ ಬರೆದಿದ್ದರು.
2018ರಲ್ಲಿ ಅಲಿಬಾಗ್ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
2020 ಮೇನಲ್ಲಿ ಅನ್ವಯ್ ನಾಯಕ್ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಭ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೆÇಲೀಸರು ತನಿಖೆ ನಡೆಸಿಲ್ಲ ಎಂದು ದೂರು ನೀಡಿದ್ದರು. ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು.
ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‍ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿರುವುದು ಹಲವು ಅನುಮಾನಗಳಿಗೆಡೆ ಮಾಡಿದೆ.