ಅರ್ನಬ್ ಗೋಸ್ವಾಮಿ ಬಂಧನ; ತುರ್ತು ಪರಿಸ್ಥಿತಿ ನೆನಪಿಸುತ್ತದೆ -ಕೇಂದ್ರ ಸಚಿವ ಜಾವಡೇಕರ್

ನವದೆಹಲಿ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಕ್ರಮವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿನ ಇಂದಿನ ಘಟನೆ ತುರ್ತು ಪರಿಸ್ಥಿತಿಯ ದಿನಗಳನ್ನು ಮತ್ತೆ ನೆನಪಿಗೆ ಬರುವಂತೆ ಮಾಡಿದೆ. ಇದು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಮಾಧ್ಯಮಗಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ತುರ್ತು ಪರಿಸ್ಥಿತಿಯ ದಿನಗಳಲ್ಲಿ ಮಾಧ್ಯಮಗಳನ್ನು ಇದೇ ರೀತಿ ನಡೆಸಿಕೊಳ್ಳಲಾಗಿತ್ತು. ಅದು ಈಗ ಮತ್ತೆ ನೆನಪಿಗೆ ಬರುವಂತಾಯಿತು ಎಂದು ಸಚಿವ ಜಾವಡೇಕರ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.