ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿಯವರನ್ನು ಸಿಬಿಐ ವಶಕ್ಕೆ ಪಡೆದಿದೆ.
ಧಾರವಾಡದ ಬರಾಕೊಟ್ರಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ಗುರುವಾರ ಬೆಳಗ್ಗೆ ಆಗಮಿಸಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.
ರಾಕೇಶ್ ರಂಜನ್ ನೇತೃತ್ವದ 6 ಮಂದಿಯ ಸಿಬಿಐ ತಂಡ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಪೆÇಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
2017ರ ಜೂ. 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಕೊಲೆ ಹಿನ್ನೆಲೆಯಲ್ಲಿ ಪೆÇಲೀಸರು ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು.
ಯೋಗಿಶ್ ಗೌಡ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.
ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಇಂದು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಠಾಣೆ ಬಳಿ ಮುಂಜಾಗೃತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದಾರೆ.
ಸಿಬಿಐ ವಶಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿ

