ಮಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವ ವಿಚಾರ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ, ಕೊಲೆ ಹಿಂದಿನ ಸತ್ಯ ಹೊರ ಬರುತ್ತದೆ ಎಂದು ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಈ ಹಿಂದೆಯೇ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯಾಗಬೇಕಿತ್ತು. ಯೊಗೇಶ್ ಕುಟುಂಬಸ್ಥರು ತುಂಬಾ ನೊಂದಿದ್ದಾರೆ. ಇದೀಗ ಸಿಬಿಐ ತನಿಖೆಯಿಂದ ಕೊಲೆ ಹಿಂದಿನ ಸತ್ಯ ಹೊರಬರುತ್ತದೆ ಎಂದು ಹೇಳಿದರು.
ಪ್ರಕರಣ ವಿಚಾರಣೆ ಹಂತದಲ್ಲಿರುವುದರಿಂದ ಈ ಬಗ್ಗೆ ಹೆಚ್ಚು ಮಾತನಾಡಲು ಆಗಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

