ಉಗ್ರನ ಹತ್ಯೆಗೈದ ಭಾರತೀಯ ಭದ್ರತಾ ಪಡೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳು ಎನ್ ಕೌಂಟರ್ ನಡೆಸಿ ಉಗ್ರನೊಬ್ಬನನ್ನು ಹತ್ಯೆಗೈದಿದೆ. ಪಾಂಪೆÇೀರ್ ಎಂಬಲ್ಲಿನ ಲಾಲ್ ಪೆÇೀರಾದಲ್ಲಿ ಭದ್ರತಾ ಪಡೆಗಳು ಉಗ್ರ ನಿಗ್ರಹ ಕಾರ್ಯಾಚರಣೆ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ, ಓಡಿ ಹೋಗಲು ಯತ್ನಿಸಿದ್ದಾರೆ.
ಆಗ ಯೋಧರು ಪ್ರತಿದಾಳಿ ನಡೆಸಿದ್ದು, ಇದರಿಂದ ಉಗ್ರನೊಬ್ಬ ಸಾವನ್ನಪ್ಪಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.