ದೀಪಾವಳಿ ವೇಳೆ ಪಟಾಕಿ ನಿಷೇಧ -ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿ ಹಬ್ಬದಂದು ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಹಚ್ಚುವುದಕ್ಕೆ ಮತ್ತು ಮಾರಾಟ ಮಾಡುವುದಕ್ಕೆ ನಿಷೇಧ ವಿಧಿಸಲಾಗಿದೆ. ಈ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ.