ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.
ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಸೋಮವಾರ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಸಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದಾಗಲೇ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು ಈಗ ರಾಜಕೀಯಕ್ಕೆ ಸೇರಿದ್ದಾರೆ.

