ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಅವರನ್ನು 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸೋಮವಾರ ವೀಡಿಯೋ ಕಾನ್ಫರನ್ಸ್ ಮೂಲಕ ಧಾರವಾಡದ 2ನೇ ಹೆಚ್ಚುವರಿ ನ್ಯಾಯಾಲಯದ ಎದುರು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಹಾಜರುಪಡಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ನ. 23 ರವರೆಗೆ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಹೆಚ್ಚಿನ ವಿಚಾರಣೆಗೆ ಸಿಬಿಐ ವಿನಯ್ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಸಿರಲಿಲ್ಲ. ವಿನಯ್ ಪರ ವಕೀಲರೂ ಜಾಮೀನು ಕೋರಿ ಅರ್ಜಿ ದಾಖಲಿಸಿರಲಿಲ್ಲ. ಹಾಗಾಗಿ ನ್ಯಾಯಾಲಯ ನ. 23ರ ವರೆಗೂ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೂರು ದಿನಗಳ ಸಿಬಿಐ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಧಾರವಾಡದ ನ್ಯಾಯಾಲಯದ ಎದುರು ವಿನಯ್ ಅವರನ್ನು ಹಾಜರುಪಡಿಸಲಾಯಿತು.