ಸೋಲಿನ ಹೊಣೆಯನ್ನು ನಾನೇ ಹೊರಲಿದ್ದೇನೆ -ಡಿ.ಕೆ.ಶಿ

ಬೆಂಗಳೂರು: ಸೋಲಿನ ಹೊಣೆಯನ್ನು ನಾನೇ ಹೊರಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.
ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾದ ನಂತರ ಡಿಕೆಶಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ. ನಾನು ಫೆಲ್ಯೂರ್ ಆಗಿದ್ದೇನೆ. ಅದನ್ನು ನಾನು ಒಪ್ಪಿದ್ದೇನೆ. ಸೋಲಿನ ಹೊಣೆಯನ್ನು ನಾನೇ ಹೊರಲಿದ್ದೇನೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮತದಾರರು ಕೊಟ್ಟ ತೀರ್ಪನ್ನು ಗೌವರಯುತವಾಗಿ ಒಪ್ಪಿಕೊಳ್ಳುತ್ತೇವೆ. ಮತದಾರರ ತೀರ್ಪನ್ನು ಪ್ರಶ್ನಿಸುವ ಪರಿಸ್ಥಿತಿ ಕಾಂಗ್ರೆಸ್‍ಗೆ ಇಲ್ಲ ಎಂದರು.
ತೀರ್ಪಿನ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಆರ್ ಆರ್ ನಗರದಲ್ಲಿ ಇಷ್ಟೊಂದು ಅಂತರ ನಾನು ನಿರೀಕ್ಷೆ ಮಾಡಿರಲಿಲ್ಲ ಎಂದರು.
ಶಿರಾ ಕ್ಷೇತ್ರದಲ್ಲಿ ನಿರೀಕ್ಷೆ ಹೆಚ್ಚು ಕಡಿಮೆ ಆಗಿದೆ. ಗೆದ್ದೆ ಗೆಲ್ಲುತ್ತೇವೆ ಎನ್ನುವ ನಿರೀಕ್ಷೆ ಇತ್ತು. ಬಿಜೆಪಿಗೆ ಬಹುಮತ ಸಿಕ್ಕಿರುವುದು ಆಶ್ಚರ್ಯವಾಗಿದೆ ಎಂದು ಹೇಳಿದರು.