ಮೈಸೂರು: ಸಚಿವ ಸ್ಥಾನಕ್ಕೆ ನಾನು ಯಾವುದೇ ಲಾಬಿ ಮಾಡುವುದಿಲ್ಲ ಎಂದು ಶಾಸಕ ಎಸ್. ಎ. ರಾಮದಾಸ್ ತಿಳಿಸಿದರು.
ನಗರದ ಖಾಸಗಿ ಹೊಟೇಲ್ ನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ರಾಮದಾಸ್ ಅವರು ಮಾತನಾಡಿದರು.
ಸಚಿವ ಸ್ಥಾನಕ್ಕಾಗಿ ನಾನು ಈ ಹಿಂದೆಯೂ ಯಾವುದೇ ಲಾಬಿ ಮಾಡಿಲ್ಲ ಈಗಲೂ ಮಾಡಲ್ಲ ಎಂದರು.
ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡುವ ವ್ಯಕ್ತಿ ನಾನಲ್ಲ. ಯಡಿಯೂರಪ್ಪ ನನ್ನ ತಂದೆ ಸ್ಥಾನದಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆಂಬ ನಂಬಿಕೆ ಇದೆ ಎಂದರು.
ನಾನು ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಜನರ ಋಣ ತೀರಿಸಲು ನನ್ನ ಜೀವತದ ಕೊನೆಯವರೆಗೂ ದುಡಿಯುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಎಸ್.ಎ. ರಾಮದಾಸ್ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಒಬ್ಬ ವಿರೋಧ ಪಕ್ಷದ ನಾಯಕ, ಆಡಳಿತ ಪಕ್ಷವನ್ನು ಟೀಕಿಸಲೇಬೇಕಾದ ಅನಿವಾರ್ಯತೆ ಅವರಿಗಿದೆ. ಈ ಹಿನ್ನೆಲೆ ಆಗಾಗ ಇಂತಹ ಹೇಳಿಕೆ ನೀಡುತ್ತಾರೆ ಎಂದರು.
ಸಚಿವ ಸ್ಥಾನಕ್ಕೆ ಲಾಬಿ ಮಾಡಲ್ಲ -ಶಾಸಕ ಎಸ್.ಎ. ರಾಮದಾಸ್

