ಬೆಂಗಳೂರು: ರಾಜ್ಯದಲ್ಲಿ ಶಾಲಾ- ಕಾಲೇಜು ಆರಂಭದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಯಿತು. ನಂತರ ಸುದ್ಧಿಗೋಷ್ಠಿ ನಡೆಸಿ ಸಚಿವ ಮಾಧುಸ್ವಾಮಿ ಮಾತನಾಡಿದರು.
ಶಾಲಾ- ಕಾಲೇಜು ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಶಾಲೆ ಆರಂಭ ಇಲ್ಲ. ಶಾಲೆ ಆರಂಭದ ಬಗ್ಗೆ ದಿನಾಂಕ ನಿಗದಿಯಾಗಿಲ್ಲ ಎಂದರು.
ತಜ್ಞರ ಅಭಿಪ್ರಾಯ ಪಡೆದ ನಂತರ ಮುಖ್ಯಮಂತ್ರಿ ಯಡಿಯೂರಪ್ಪನವರು ಶಾಲೆ ಆರಂಭದ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ಸಚಿವ ಮಾಧು ಸ್ವಾಮಿ ತಿಳಿಸಿದರು.
ಶಾಲಾ-ಕಾಲೇಜು ಆರಂಭ ಬಗ್ಗೆ ಚರ್ಚಿಸಿಲ್ಲ -ಸಚಿವ ಮಾಧುಸ್ವಾಮಿ

