ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಅರುಣ್ ಸಿಂಗ್ ನೇಮಕ

ನವದೆಹಲಿ: ಕರ್ನಾಟಕ ರಾಜ್ಯದ ಬಿಜೆಪಿ ಉಸ್ತುವಾರಿಯಾಗಿ ಅರುಣ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಉಪ ಉಸ್ತುವಾರಿಯಾಗಿ ಡಿಕೆ ಅರುಣಾ ಅವರನ್ನು ಬಿಜೆಪಿ ಹೈ ಕಮಾಂಡ್ ನೇಮಿಸಿದೆ.
ಅರುಣ್ ಸಿಂಗ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಈ ಹಿಂದೆ ರಾಜಸ್ಥಾನದ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದ ಅರುಣ್ ಸಿಂಗ್ ಅವರನ್ನು ಕರ್ನಾಟಕ ಬಿಜೆಪಿ ಉಸ್ತುವಾರಿಯನ್ನಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇಮಕ ಮಾಡಿದ್ದಾರೆ.
ಈ ಹಿಂದೆ ಕರ್ನಾಟಕ ಬಿಜೆಪಿಯ ಉಸ್ತುವಾರಿಯಾಗಿದ್ದ ಮುರಳೀಧರ ರಾವ್ ಗೆ ಮಧ್ಯಪ್ರದೇಶದ ಉಸ್ತುವಾರಿ ವಹಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿಟಿ ರವಿ ಅವರಿಗೆ ಮಹಾರಾಷ್ಟ್ರ, ಗೋವಾ, ತಮಿಳುನಾಡು ಮೂರು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ.