ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು ಇವರಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.
ಕಳೆದೆರಡು ದಿನಗಳ ಹಿಂದೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಆದೇಶಿಸಿತ್ತು. ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ನೀಡಿದೆ.

