ಬಲವಂತದ ಬಂದ್ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ -ಸಿಎಂ ಬಿ.ಎಸ್.ವೈ

ಬೆಂಗಳೂರು: ಬಲವಂತದ ಬಂದ್ ಮಾಡಿದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಗರದಲ್ಲಿ ಬುಧವಾರ ಮುಖ್ಯಮಂತ್ರಿಗಳು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕರ್ನಾಟಕದಲ್ಲಿರುವ ಮರಾಠಿಗರು ಸಹ ನಮ್ಮ ಕನ್ನಡಿಗರೇ. ಅವರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ. ಹಾಗಾಗಿ ಡಿ. 5 ರಂದು ಬಂದ್ ಮಾಡುವ ಅಗತ್ಯವಿಲ್ಲ. ಬಂದ್ ಗೆ ಯಾರೂ ಕರೆ ನೀಡಬಾರದು. ಒಂದು ವೇಳೆ ಬಲವಂತದಿಂದ ಅಂದು ಬಂದ್ ಮಾಡಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದರು.