ವಿಜಯನಗರ ಜಿಲ್ಲೆಯಾಗಿ ರಚಿಸಲು ಸಂಪುಟ ಒಪ್ಪಿಗೆ -ಸಚಿವ ಮಧುಸ್ವಾಮಿ

ಬೆಂಗಳೂರು: ವಿಜಯನಗರವನ್ನು ನೂತನ ಜಿಲ್ಲೆಯಾಗಿ ರಚಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಮಧುಸ್ವಾಮಿ ತಿಳಿಸಿದರು.
ನಗರದಲ್ಲಿ ಬುಧವಾರ ಸಚಿವ ಮಧುಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ನೂತನ ಜಿಲ್ಲೆ ರಚನೆಗೆ ತಾತ್ವಿಕ ಅನುಮೋದನೆ ದೊರೆತಿದೆ ಎಂದು ಹೇಳಿದರು.
ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ. ಮುಂದಿನ ಸಭೆಯಲ್ಲಿ ಅಧಿಕೃತ ಅನುಮೋದನೆ ಸಿಗಲಿದೆ ಎಂದವರು ತಿಳಿಸಿದರು.
ಜಿಲ್ಲೆಯ ರಚನೆ ಸಂಬಂಧ ಪ್ರಕ್ರಿಯೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆಂದು ಅವರು ಹೇಳಿದರು.