ಬೆಂಗಳೂರು: ಮರಾಠ ಸಮುದಾಯ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಮಧುಸ್ವಾಮಿ ಹೇಳಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ನಂತರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮರಾಠ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದವರು ಹೇಳಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆಗೆ ನಿರ್ಧರಿಸಲಾಗಿದೆ. ಇನ್ನು ಮುಂದೆ ಮರಾಠ ಸಮುದಾಯ ನಿಗಮ ಎಂದು ಬದಲಾವಣೆಯಾಗಲಿದೆ ಎಂದು ಅವರು ತಿಳಿಸಿದರು.
ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡಬೇಕು. ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು ಎಂದರು. ಹಣ ಎಷ್ಟು ನಿಗದಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸಚಿವ ಮಧುಸ್ವಾಮಿ ಹೇಳಿದರು.
ಮರಾಠ ಸಮುದಾಯ ನಿಗಮ ಸ್ಥಾಪನೆ -ಸಚಿವ ಮಧುಸ್ವಾಮಿ

