ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ನನಗೆ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.
ಕೇಂದ್ರ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಗಳೊಂದಿಗೆ ಸಿಎಂ ಅವರು ಮಾತನಾಡಿದರು.
ನಮ್ಮ ನಾಯಕರ ಜೊತೆ ಮಾತನಾಡಿದ್ದೇನೆ. ಅವರು ಇನ್ನೆರಡು ಮೂರು ದಿನಗಳಲ್ಲಿ ತೀರ್ಮಾನ ಹೇಳಲಿದ್ದಾರೆಂದರು.
ನಮ್ಮ ಪಕ್ಷ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

