ಲಾಹೋರ್: ಮುಂಬೈ ಉಗ್ರ ದಾಳಿಯ ರೂವಾರಿ ಹಫೀಜ್ ಸಯೀದ್ ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಗುರುವಾರ ಜಮಾತ್-ಉದ್-ದಾವಾ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಳೆದ ವರ್ಷ ಜುಲೈ 17ರಂದು ನಡೆದ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಈಗ ಮತ್ತೆ ಎರಡು ಪ್ರಕರಣಗಳಲ್ಲಿ ಕೋರ್ಟ್ ಹಫೀಜ್ ಗೆ ಮತ್ತೆ 10 ವರ್ಷ ಜೈಲು ಶಿಕ್ಷೆಗೆ ಗುರಿಪಡಿಸಿದೆ.
ಲಾಹೋರ್ ಜೈಲಿನಲ್ಲಿರುವ ಹಫೀಜ್ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿದೆ.
ಹಫೀಜ್ ನ ಮೂರು ಮಂದಿ ಸಹಚರರಿಗೂ ನ್ಯಾಯಾಲಯ ಜೈಲು ಶಿಕ್ಷೆಗೆ ಒಳಪಡಿಸಿದೆ.
ಮುಂಬೈ ದಾಳಿ ರೂವಾರಿ ಹಫೀಜ್ ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

