ಬೆಂಗಳೂರು: ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿ ಆರ್ ದೇವದಾಸ್ ಏಕ ಸದಸ್ಯಪೀಠ ಮೀಸಲಾತಿ ಅಧಿಸೂಚನೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.
ನಾಲ್ಕು ವಾರಗಳಲ್ಲಿ ನೂತನ ಮೀಸಲಾತಿ ಪಟ್ಟಿಯನ್ನು ಮತ್ತೆ ಪ್ರಕಟಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳಿಗೆ ಮೀಸಲಾತಿ ನಿಗದಿ ಪಡಿಸಿ ರಾಜ್ಯ ಸರಕಾರ ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು.
ಈ ಕುರಿತು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆಯನ್ನು ರದ್ದುಗೊಳಿಸಿದೆ.
ಹಲವು ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಆಯ್ಕೆಯಾಗಿದ್ದಾರೆ.
ನಗರಸಭೆ, ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿ ಅಧಿಸೂಚನೆ ರದ್ದುಗೊಳಿಸಿದ ಹೈಕೋರ್ಟ್

