ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚನೆಗೆ ತೀರ್ಮಾನಿಸಿರುವುದನ್ನು ವಿರೋಧಿಸಿ ಡಿ. 5ರಂದು ಕರ್ನಾಟಕ ಬಂದ್ ಮಾಡಲಾಗುವುದೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಕನ್ನಡಪರ ಸಂಘಟನೆಗಳ ಕನ್ನಡ ಒಕ್ಕೂಟ ಸಭೆ ನಡೆಯಿತು. ನಂತರ ವಾಟಾಳ್ ನಾಗರಾಜ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮರಾಠ ಅಭಿವೃದ್ದಿ ನಿಗಮ ರಚನೆ ಖಂಡಿಸಿ ಡಿ. 5ರಂದು ಕರ್ನಾಟಕ ಬಂದ್ ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಡಿ. 5ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುತ್ತದೆ ಎಂದವರು ತಿಳಿಸಿದರು.
ನ. 30ರೊಳಗೆ ಮರಾಠ ಅಭಿವೃದ್ದಿ ನಿಗಮ ರಚನೆ ಹಿಂಪಡೆಯಬೇಕು ಇಲ್ಲದಿದ್ದರೇ ಬಂದ್ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ಡಿ. 5ರಂದು ಕರ್ನಾಟಕ ಬಂದ್ -ವಾಟಾಳ್ ನಾಗರಾಜ್

