ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ -ಸಚಿವ ಸುಧಾಕರ್

ಬೆಳಗಾವಿ: ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಚಿವ ಡಾ.ಕೆ.ಸುಧಾಕರ್ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರ, ಪ್ರಧಾನಿಯವರು ಕ್ಲಿನಿಕಲ್ ಟ್ರಯಲ್ ನಡೆಸಿರುವ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಅಡ್ವಾನ್ಸ್ ಆಗಿ ಮೂರನೇ ಹಂತ ತಲುಪಿದ ಕಂಪನಿ ಜೊತೆ ಕೇಂದ್ರ ಸಮಾಲೋಚನೆ ನಡೆದಿದ್ದು, ಅದೇ ರೀತಿ ಕಂಪನಿಗಳ ಜೊತೆ ಕೇಂದ್ರ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ. ಯಾವ ಕಂಪನಿಗೆ ಡಬ್ಲ್ಯೂಹೆಚ್ ಒ ಅಧಿಕೃತ ಅಂತಾ ಘೋಷಣೆ ಮಾಡ್ತಾರೆ ಆ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದರು.
ಭಾರತ ದೇಶದಲ್ಲಿ ದೊಡ್ಡ ಮಟ್ಟಿಗೆ ಲಸಿಕೆ ಸಿಗುವ ಕೆಲಸ ಆಗುತ್ತೆ, ಆರೋಗ್ಯ ಇಲಾಖೆಯಲ್ಲಿ ಜನಪರ ಬದಲಾವಣೆಗಳು ನಡೀತಾ ಇವೆ, ಅಂತಾರಾಷ್ಟ್ರೀಯ ಗುಣಮಟ್ಟದ 108 ಆ್ಯಂಬುಲೆನ್ಸ್ ಸರ್ವೀಸ್‍ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಸಿಕೆ ಬಂದರೆ ಅದರ ಸಂಗ್ರಹಕ್ಕೆ ಎಲ್ಲ ವ್ಯವಸ್ಥೆ ಆಗಿದೆ ಎಂದು ಸುಧಾಕರ್ ತಿಳಿಸಿದರು.