ಬಲವಂತದ ಬಂದ್ ಗೆ ಅವಕಾಶ ಕೊಡುವುದಿಲ್ಲ -ಸಿಎಂ ಎಚ್ಚರಿಕೆ

ಬೆಂಗಳೂರು: ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಸಿಎಂ ಹೇಳಿದರು.
ಡಿ. 5ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಬಗ್ಗೆ ಬಿ.ಎಸ್.ವೈ. ಪ್ರತಿಕ್ರಿಯಿಸಿಸಿದರು.
ತಾವು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು, ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ ಒದಗಿಸಲು ಸಿದ್ಧ. ಆದರೆ ಬಂದ್ ಕರೆ ಕೊಡುವುದು ಸೂಕ್ತ ಅಲ್ಲ. ರಾಜ್ಯದ ಜನ ಇದನ್ನು ಮೆಚ್ಚುವುದಿಲ್ಲ ಎಂದರು.
ಪ್ರತಿಭಟನಕಾರರು ಪ್ರತಿಕೃತಿ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುತ್ತಿರುವುದನ್ನು ಗಮನಿಸುತ್ತಿದ್ದೇನೆ. ಇಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ, ಪ್ರತಿಭಟನೆಗೆ ಬೇರೆ ಸ್ಚರೂಪ ಕೊಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.