ಜನರ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ವಿಫಲ -ಡಿ.ಕೆ. ಶಿವಕುಮಾರ್

ಬೆಂಗಳೂರು: ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಹಿರಿಯೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಡಿ. ಕೆ. ಶಿವಕುಮಾರ್ ಭಾನುವಾರ ಮಾತನಾಡಿದರು.
ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
ಹೊಸ ಜಿಲ್ಲೆ ರಚನೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಡಿಕೆಶಿ ಉತ್ತರಿಸಿ, ನೂತನ ಜಿಲ್ಲೆ ರಚನೆ ಬಗ್ಗೆ ಮಾಹಿತಿ ಇಲ್ಲ. ಈವರೆಗೂ ಸರ್ಕಾರ ಆದೇಶ ಹೊರಡಿಸಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಬಂದ ನಂತರ ನಾನು ಮಾತನಾಡುತ್ತೇನೆ ಎಂದರು.