ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ಸೋಮವಾರ ದಾಳಿ ನಡೆಸಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ರೋಷನ್ ಬೇಗ್ ಬಂಧನ ನಂತರ ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ಮಾಡಿದೆ.
ಸಿಬಿಐ 7 ಅಧಿಕಾರಿಗಳ ತಂಡ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ
ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಮನ್ಸೂರ್ ಖಾನ್ ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ

