ಡಾ. ಗುರುಪ್ರಸಾದ ಎಚ್. ಎಸ್.
ಲೇಖಕರು ಮತ್ತು ಉಪನ್ಯಾಸಕರು
dr.guruhs@gmail.com
71 ವರ್ಷ ಗಳ ಹಿಂದೆ ಇದೇ ದಿನ ಅಂದರೆ 26 .11.1949ರಂದು ಸಂವಿಧಾನವನ್ನು ಸ್ವೀಕರಿಸಲಾಯಿತು
ಸಂವಿಧಾನದ ಬಗ್ಗೆ ಕೆಲವು ಮಾಹಿತಿಗಳು
- ಇದು 1950ರ ಜನವರಿ 26ರಂದು ಅನುಷ್ಠಾನಕ್ಕೆ ಬಂತು.
- ಭಾರತದ ಸಂವಿಧಾನವು ಟೈಪ್ ಮಾಡಿರುವುದಲ್ಲ ಅಥವಾ ಮುದ್ರಿತವೂ ಅಲ್ಲ. ಅದನ್ನು ಕೈಯಲ್ಲಿ ಬರೆಯಲಾಗಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿದೆ.
- ಭಾರತ ಸಂವಿಧಾನದ ಮೂಲ ಪ್ರತಿಗಳನ್ನು ವಿಶೇಷ ಹೀಲಿಯಂ ತುಂಬಿದ ಕವಚಗಳಲ್ಲಿ ಸಂರಕ್ಷಿಸಲಾಗಿದ್ದು, ಇದು ಭಾರತದ ಸಂಸತ್ ಭವನದ ಗ್ರಂಥಾಲಯದಲ್ಲಿದೆ.
- ಭಾರತ ಸಂವಿಧಾನವನ್ನು ಬೇರೆ ಕಡೆಗಳಿಂದ ಪಡೆದ ಅಂಶಗಳ ಚೀಲ ಎಂದು ಕರೆಯಲಾಗುತ್ತಿದೆ.
- ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತದ ಪರಿಕಲ್ಪನೆಗಳನ್ನು ಫ್ರಾನ್ಸ್ ಸಂವಿಧಾನದಿಂದ ಪಡೆಯಲಾಗಿದೆ.
- ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಸೋವಿಯತ್ ಒಕ್ಕೂಟದಿಂದ ಪಡೆಯಲಾಗಿದೆ.
- ರಾಜ್ಯ ನಿರ್ದೇಶನ ತತ್ವಗಳು ಐರ್ಲೆಂಡ್ ಸಂವಿಧಾನದ ಕೊಡುಗೆ
- ಸುಪ್ರೀಂಕೋರ್ಟ್ ಕಾರ್ಯನಿರ್ವಹಣೆಯ ಕಾನೂನನ್ನು ಜಪಾನ್‍ನಿಂದ ಎರವಲು ಪಡೆಯಲಾಗಿದೆ.
- ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ.
- ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್, 5 ಅನುಬಂಧಗಳು, 98 ತಿದ್ದುಪಡಿಗಳಿವೆ.
- ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳೆಯರು.
- ಇದರ ಕರಡನ್ನು 1949ರ ನವೆಂಬರ್ನಲ್ಲಿ ಸಲ್ಲಿಸಲಾಯಿತು. ಸಲ್ಲಿಕೆ ಬಳಿಕ ಅದನ್ನು ಪೂರ್ಣಗೊಳಿಸಲು ಮೂರು ವರ್ಷ ಬೇಕಾಯಿತು.
- ಸಂವಿಧಾನ ರಚನಾ ಸಮಿತಿಯಲ್ಲಿದ್ದ ಎಲ್ಲ 284 ಮಂದಿ ಸದಸ್ಯರು 1950ರ ಜನವರಿ 24ರಂದು ಈ ದಾಖಲೆಗೆ ಸಹಿ ಮಾಡಿದರು.
13.1950ರ ಜನವರಿ 26ರಂದು ಇದು ಅಸ್ತಿತ್ವಕ್ಕೆ ಬಂತು. - ಭಾರತದ ರಾಷ್ಟ್ರಲಾಂಛನವನ್ನೂ ಅದೇ ದಿನ ಅಳವಡಿಸಿಕೊಳ್ಳಲಾಯಿತು.
ಭಾರತದ ಸಂವಿಧಾನವನ್ನು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲೊಂದು ಎಂದು ಹೇಳಲಾಗಿದೆ. ಏಕೆಂದರೆ ಅದಕ್ಕೆ ಕೇವಲ 94 ತಿದ್ದುಪಡಿಗಳನ್ನು ತರಲಾಗಿದೆ.

