ಮೈಸೂರು: ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ. ಪಂಚೆಯನ್ನು ಮುಳ್ಳಿನಿಂದ ಹುಷಾರಾಗಿ ತೆಗಿಬೇಕು ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದರು.
ನಗರದಲ್ಲಿ ಗುರುವಾರ ಶ್ರೀನಿವಾಸ್ ಪ್ರಸಾದ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಯಡಿಯೂರಪ್ಪ ಮೇಲೆ ಹೈಕಮಾಂಡ್ ಒತ್ತಡ ಇದೆ ಎಂಬ ವಿಚಾರ ಕುರಿತು ಸಂಸದ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿ, ಅಧಿಕಾರ ನಡೆಸುವುದು ಬಹಳ ಕಠಿಣ ಕೆಲಸ. ಸಿಎಂಗೆ ಇನ್ನು ಬಾಕಿ ಇರೋದು ಎರಡೂವರೆ ವರ್ಷ. ಅಷ್ಟರೊಳಗೆ ಏನಾದರು ಮಾಡಬೇಕಲ್ಲವೇ? ಎಂದರು.
ಮತ್ತೊಂದು ಪ್ರಶ್ನೆಗೆ ಶ್ರೀನಿವಾಸ ಪರಸಾದ್ ಪ್ರತಿಕ್ರಿಯಿಸಿ, ಯಡಿಯೂರಪ್ಪ ಬದಲಾಗಿದ್ದಾರೆ ಅಂತ ಹೇಳುವುದಿಲ್ಲ. ಬದಲಾಗಿಲ್ಲ ಅಂತಲೂ ಹೇಳುವುದಿಲ್ಲ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಉಪಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬಂದಿದೆ. ಇದಕ್ಕಾಗಿ ಹೀಗ್ಗಿ ಹೀರೇಕಾಯಿ ಆಗಬೇಕಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಟಾಂಗ್ ನೀಡಿದರು.
ನಿಗಮ- ಮಂಡಳಿಗೆ ಎಲ್ಲರೊಂದಿಗೆ ಚರ್ಚಿಸಿ ನೇಮಕ ಮಾಡಿದ್ದರೆ ಇನ್ನೂ ಚೆನ್ನಾಗಿ ಆಗುತ್ತಿತ್ತು. ಅವರಿಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ. ಇದರಿಂದ ನನಗೆ ಬೇಸರ ಆಗಿದೆ ಎಂದು ಅವರು ತಿಳಿಸಿದರು.
ಸಚಿವ ಸಂಪುಟದ ಪುನರ್ ರಚನೆ ಬೇಡ. ಉಳಿದ ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕು ಎಂದು ಶ್ರೀನಿವಾಸ ಪ್ರಸಾದ್ ಹೇಳಿದರು.

