‘ಕರ್ನಾಟಕ ಬಂದ್’ ಕಾಂಗ್ರೆಸ್ ಬೆಂಬಲಿಸಲ್ಲ -ಸತೀಶ್ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಬೆಂಬಲ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಚಿಕ್ಕೋಡಿ ಹಾಗೂ ಗೋಕಾಕ್ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಅವರು ತಿಳಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧೆಗೆ ವೈಯಕ್ತಿಕವಾಗಿ ನನಗೆ ಆಸಕ್ತಿ ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಯಾರಾಗಬಹುದು ಎಂಬ ಬಗ್ಗೆ ಡಿಸೆಂಬರ್ ಮೊದಲ ವಾರದಲ್ಲಿ ಚರ್ಚಿಸಲಾಗುವುದು. ಮೂವರು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುವುದು. ಆದರೆ, ಪಕ್ಷಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ ಎಂದರು.
ಮಸ್ಕಿ ವಿಧಾನ ಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸಲಿದೆ ಎಂದು ಅವರು ಆಶಾಭಾವನೆ ವ್ಯಕ್ತಪಡಿಸಿದರು.