ವಿಜಯನಗರ ಜಿಲ್ಲೆಗೆ 6 ತಾಲೂಕುಗಳ ಸೇರ್ಪಡೆ

ಬೆಂಗಳೂರು: ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರ್ಪಡೆ ಮಾಡಲು ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿದ್ದು, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ನಿರ್ಧಾರವನ್ನು ಸಂಪುಟ ಸಭೆಯಲ್ಲಿಕೈಗೊಳ್ಳಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿ 6 ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆ ಮಾಡಲಾಗಿದೆ.
ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಉಳಿದಿದೆ.