ಬೆಂಗಳೂರು: ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ವಿಚಾರದ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಶುಕ್ರವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ವೀರಶೈವ-ಲಿಂಗಾಯತ ಮೀಸಲಾತಿ ವಿಚಾರದ ಬಗ್ಗೆ ಚರ್ಚೆ ನಡೆಸುತ್ತೇವೆ. ಆದರೆ ಈ ಬಗ್ಗೆ ಇಂದಿನ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲ್ಲ ಎಂದರು.
ಮತ್ತೊಮ್ಮೆ ದೆಹಲಿಗೆ ಹೋಗಿ ಈ ಬಗ್ಗೆ ಸಮಾಲೋಚನೆ ನಡೆಸಿ ನಂತರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

