ಬೆಳಗಾವಿ: ರಮೇಶ್ ಜಾರಕಿಹೊಳಿ ಯೋಗೇಶ್ವರ್ ಪರ ಲಾಬಿ ಮಾಡುವುದರಲ್ಲಿ ತಪ್ಪಿಲ್ಲ ಎಂದು ಕಂದಾಯ ಸಚಿವ ಈಶ್ವರಪ್ಪ ಹೇಳಿದರು.
ನಗರದಲ್ಲಿ ಶನಿವಾರ ಈಶ್ವರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಮೇಶ್ ಜಾರಕಿಹೊಳಿ ಅವರು ಅವರನ್ನು ನಂಬಿದವರಿಗೆ ಮಂತ್ರಿ ಸ್ಥಾನ ಕೊಡಿಸಲು ಲಾಭಿ ಮಾಡುವದರಲ್ಲಿ ತಪ್ಪಿಲ್ಲ. ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನಡೆಸಲು ಅವರು ಪ್ರಯತ್ನ ಮಾಡುವದರಲ್ಲಿ ತಪ್ಪಿಲ್ಲ ಎಂದರು.
ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದರು.
ಕೆಲವು ಶಾಸಕರು ಬಿಜೆಪಿಗೆ ಬಂದು ಸರ್ಕಾರ ರಚನೆಗೆ ತ್ಯಾಗ ಮಾಡಿದ್ದಾರೆ. ಅವರೂ ಬಿಜೆಪಿ ಅವರೇ ಅವರ ಋಣ ತೀರೀಸಬೇಕಾಗಿದೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಈಶ್ವರಪ್ಪ, ಬಿಜೆಪಿಯಲ್ಲಿ ಗುಂಪುಗಾರಿಕೆ ಇಲ್ಲ. ಗುಂಪುಗಾರಿಕೆ ಇರೋದು ಕಾಂಗ್ರೆಸ್ ನಲ್ಲಿ ಎಂದು ಹೇಳಿದರು.
ಕುರುಬ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರಿಸಬೇಕೆಂದು ಹೋರಾಟ ನಡೆಸಿದ್ದೇವೆ. ನಮ್ಮ ಹೋರಾಟಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಮತ ಇದೆ. ಈ ಕುರಿತು ಇಂದು ಬೆಳಗಾವಿಯಲ್ಲಿ ಸಭೆ ಮಾಡುತ್ತೇವೆ. ನಾಳೆ ಬಾಗಲಕೋಟೆಯಲ್ಲಿ ಕುರುಬ ಸಮಾಜದ ವಿಭಾಗ ಮಟ್ಟದ ಸಭೆ ಮಾಡುತ್ತೇವೆ. ಸರ್ಕಾರವೂ ಕುರುಬ ಸಮಾಜವನ್ನು ಎಸ್.ಟಿ ವರ್ಗಕ್ಕೆ ಸೇರಿಸುವದಕ್ಕಾಗಿ ಅಧ್ಯಯನ ಸಮೀತಿ ರಚಿಸಿದೆ. ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ನಿರ್ಧಾರ ಹೊರಬೀಳಲಿದೆ ಎಂದು ಈಶ್ವರಪ್ಪ ತಿಳಿಸಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದ್ದು ನನಗೆ ದೆಹಲಿಯಿಂದ ಮಾಹಿತಿ ಬಂದಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ, ಸಿದ್ದರಾಮಯ್ಯ ಹುಚ್ಚು ಹೇಳಿಕೆಗೆ ಅರ್ಥವಿಲ್ಲ. ರಾಜಕೀಯದಲ್ಲಿ ಸೋತಿರುವ ಅವರು ವಿರೋಧ ಪಕ್ಷದಲ್ಲಿ ಕೆಲಸ ಮಾಡಿಕೊಂಡು ಇರಬೇಕೆಂದರು.
ವಿರೋಧ ಪಕ್ಷದಲ್ಲಿ ಇದ್ದವರು ಆಡಳಿತ ಪಕ್ಷದ ಕಾರ್ಯವೈಖರಿ ತಿದ್ದುವ ಕೆಲಸ ಮಾಡಬೇಕು. ಅದು ಬಿಟ್ಟು ನಮ್ಮ ಪಕ್ಷದ ಸಿಎಂ ಬದಲಾವಣೆ ಕುರಿತು ಮಾತನಾಡುವುದು ಎಷ್ಟು ಸರಿ ಎಂದು ಈಶ್ವರಪ್ಪ ಪ್ರಶ್ನಿಸಿದರು.
ರಮೇಶ್ ಜಾರಕಿಹೊಳಿ ಯೋಗೇಶ್ವರ್ ಪರ ಲಾಬಿ ಮಾಡುವುದರಲ್ಲಿ ತಪ್ಪಿಲ್ಲ -ಈಶ್ವರಪ್ಪ

