ಮೈಸೂರು: ಡಿ ಕೆ ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯುವುದರಲ್ಲಿ ನಿಸ್ಸೀಮರು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಅಶೋಕ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಂತೋಷ್ ಆತ್ಮಹತ್ಯಗೆ ವಿಡಿಯೋ ಕಾರಣ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಸಚಿವ ಅಶೋಕ್ ಪ್ರತಿಕ್ರಿಯಿಸಿ, ಡಿ ಕೆ ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯುವುದರಲ್ಲಿ ನಿಸ್ಸೀಮರು ಎಂದರು.
ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ನಂತರ ಅವರಿಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಹಾಗಾಗಿ ಅವರು ಏನೇನೋ ಮಾತನಾಡುತ್ತಾರೆಂದರು.
ಸಂತೋಷ್ ಮರೆವಿನಿಂದ ನಿದ್ರೆ ಮಾತ್ರೆ ನುಂಗಿರಬಹುದು ಅಥವಾ ಯಾವ ಕಾರಣಕ್ಕೆ ನಿದ್ದೆ ಮಾತ್ರೆ ನುಂಗಿದರು
ಇದನ್ನು ಸಂತೋಷ್ ಅವರೇ ಹೇಳಬೇಕು. ಅವರೀಗ ಚೇತರಿಸಿಕೊಂಡಿದ್ದಾರೆ. ಅವರ ಹೇಳಿಕೆ ನಂತರ ಎಲ್ಲವೂ ಗೊತ್ತಾಗಲಿದೆ ಎಂದರು.
ಸಂತೋಷ್ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ಎಂದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕರ್ನಾಟಕ ರಾಜ್ಯದಲ್ಲಿ ಮಾತ್ರ ಗಿರಿಗಿಟ್ಲೆ ಹೊಡೆಯುತ್ತಿದೆ. ದೆಹಲಿ ನಾಯಕರ ಮುಂದೆ ನಾಯಕತ್ವ ಬದಲಾವಣೆ ವಿಚಾರ ಇಲ್ಲ ಎಂದು ಅಶೋಕ್ ಹೇಳಿದರು.
ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದರು.
ಈ ಬಗ್ಗೆ ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಷಾ, ಬಿಜೆಪಿ ಕರ್ನಾಟಕ ಉಸ್ತುವಾರಿ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ ಅವರು ಈ ವಿಚಾರರವನ್ನು ನಿರಾಕರಿಸಿದ್ದಾರೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು.
ಡಿಕೆ ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯುವುದರಲ್ಲಿ ನಿಸ್ಸೀಮರು -ಸಚಿವ ಅಶೋಕ್

