ಡಿ.ಕೆ.ಶಿವಕುಮಾರ್ ಗೆ ಸೋಲಿನ ಹತಾಶೆ ಕಾಡುತ್ತಿದೆ -ಬಿ.ವೈ ವಿಜಯೇಂದ್ರ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೋಲಿನ ಹತಾಶೆ ಕಾಡುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ನಗರದಲ್ಲಿ ಸೋಮವಾರ ಬಿ.ವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಡಿ.ಕೆ ಶಿವಕುಮಾರ್ ಸೋಲಿನ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಶಿರಾ ಮತ್ತು ಆರ್.ಆರ್ ನಗರ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಹತಾಶೆಯಿಂದ ಈ ರೀತಿ ಆರೋಪ ಮಾಡಿದ್ದಾರೆಂದರು.
ಸಂತೋಷ್ ವಿಚಾರವನ್ನು ರಾಜಕೀಯಕ್ಕೆ ತರುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಸಂತೋಷ್ ರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಆದರೆ ಈ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ರಾಜಕೀಯ ಹುಡುಕುತ್ತಿದ್ದಾರೆಂದರು. ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ ಎಂದರು.