ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.
2 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಮೊದಲ ಹಂತದ ಮತದಾನ ಡಿ. 22ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಡಿ. 27ರಂದು ನಡೆಯಲಿದೆ.
ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಡಿ. 30ರಂದು ಮತ ಎಣಿಕೆ ನಡೆಯಲಿದೆ. ಡಿ. 7ರಂದು ಅಧಿಸೂಚನೆ ಹೊರಬೀಳಲಿದೆ. ಡಿ. 11 ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ. ನಾಮಪತ್ರ ವಾಸಪ್ ಪಡೆಯಲು ಡಿ. 19ರಂದು ಕೊನೆ ದಿನ. ಡಿ. 30ರಂದು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 92,121 ಸದಸ್ಯರಿಗೆ ಚುನಾವಣೆ ನಡೆಯಲಿದೆ. 5762 ಗ್ರಾಮ ಪಂಚಾಯತಿಗೆ ಚುನಾವಣೆ ನಡೆಸಲಾಗುತ್ತದೆ.