ಬೆಂಗಳೂರು: ಮಾಜಿ ಸಚಿವ ಸಾ.ರಾ.ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ನಗರದಲ್ಲಿ ಮಂಗಳವಾಋ ವಿಶ್ವನಾಥ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ಗೆ ನ್ಯಾಯದೇವತೆ ಶಿಕ್ಷೆ ನೀಡಿದ್ದಾಳೆ ಎಂದು ಹೇಳಿದ್ದರು. ಈ ಹೇಳಿಕೆಗೆ ವಿಶ್ವನಾಥ್ ಪ್ರತಿಕ್ರಯಿಸಿ, ಸಾರಾ ಮಹೇಶ ಕೊಚ್ಚೆ ಗುಂಡಿಯಂತೆ ಕಲ್ಲು ಎಸೆದು ಪದೇ ಪದೇ ಕೊಳೆ ಮಾಡಿಕೊಳ್ಳಲು ನಾನು ಇಷ್ಟಪಡುವುದಿಲ್ಲ. ಇದರಿಂದ ನನ್ನ ಶುಭ್ರ ವಸ್ತ್ರ ಕೊಳೆ ಮಾಡಿಕೊಳ್ಳಲು ನಾನು ತಯಾರಿಲ್ಲ. ಯಾರ ಬಗ್ಗೆ ಏನು ಮಾತನಾಡಬೇಕು ಎಂಬ ಅರಿವಿಲ್ಲದೆ, ಬಾಯಿಗೆ ಬಂದಂತೆ ಮಾತನಾಡುವವರಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಹೈ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ತೀರ್ಪಿನ ಪ್ರತಿ ಕೈ ಸೇರಿದ ಮೇಲೆ ವಕೀಲರೊಂದಿಗೆ ಚರ್ಚಿಸಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ಸಾರಾ ಮಹೇಶ್ ಕೊಚ್ಚೆ ಗುಂಡಿ; ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ -ಹೆಚ್.ವಿಶ್ವನಾಥ್

