ಬೆಂಗಳೂರು: ನೈಟ್ ಕರ್ಫ್ಯೂ ಜಾರಿಗೊಳಿಸುವ ಯಾವುದೇ ಯೋಚನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಶುಕ್ರವಾರ ಬಿಎಸ್ ವೈ ಮಾಧ್ಯಮ ಪ್ರತಿನಿಧೀಗಳೊಂದಿಗೆ ಮಾತನಾಡಿದರು.
ನೈಟ್ ಕರ್ಫ್ಯೂ ಇಲ್ಲದಿದ್ದರೂ ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಕೆಲವೊಂದು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ಸಿಎಂ ಹೇಳಿದರು.

