ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ಸುಧಾರಣೆ; ಡಿಪೆÇ್ಲಮಾ ಪಠ್ಯ ಆಮೂಲಾಗ್ರ ಬದಲಾವಣೆ -ಡಿಸಿಎಂ

ಬೆಂಗಳೂರು: ಉದ್ಯೋಗ ಮಾರುಕಟ್ಟೆಗೆ ಅನುಗುಣವಾಗಿ ಡಿಪೆÇ್ಲಮಾ ಪಠ್ಯವನ್ನು ಆಮೂಲಾಗ್ರವಾಗಿ ಬದಲಾವಣೆ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಿಗೆ ಸಂಬಂಧಿಸಿದ ವಿಧಾನಪರಿಷತ್ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸದ್ಯಕ್ಕೆ ಇರುವ ಡಿಪೆÇ್ಲಮಾ ಕೋರ್ಸ್ ಗಳಿಂದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ. ಪ್ರತೀ ವರ್ಷಕ್ಕೆ ರಾಜ್ಯದಲ್ಲಿ 40 ಸಾವಿರ ಅಂತಿಮ ವರ್ಷದ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದು, ಈ ಪೈಕಿ ಕೊನೆ ಪಕ್ಷ ಶೇ. 20ರಷ್ಟು ವಿದ್ಯಾರ್ಥಿಗಳಿಗೂ ಉದ್ಯೋಗ ಸಿಗುತ್ತಿಲ್ಲ ಎಂದರು.
ಅದಕ್ಕೆ ಕಾರಣ ಈಗಿರುವ ಡಿಪೆÇ್ಲಮಾ ಪಠ್ಯವೂ ಸಕಾಲಿಕವಾಗಿಲ್ಲ, ಇವತ್ತಿನ ಕೈಗಾರಿಕೆ ಅಗತ್ಯಗಳಿಗೆ ಅದು ಅಪ್ರಸ್ತುತವಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ಅಗತ್ಯ ಇರುವ, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಹಾಗೂ ಸದಾಕಾಲ ಕೆಲಸಕ್ಕೆ ಅರ್ಹತೆ ಕಲ್ಪಿಸಬಲ್ಲ ಪಠ್ಯವನ್ನು ಸಂಬಂಧಪಟ್ಟ ಎಲ್ಲರ ಜತೆ ಚರ್ಚಿಸಿ ರೂಪಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.
ಡಿಪೆÇ್ಲಮಾ ಕೋರ್ಸ್‍ನ ಪಠ್ಯವನ್ನು ಮರುಪರಿಷ್ಕಣೆ ಮಾಡುವ ಮೂಲಕ ನ್ಯಾಷನಲ್ ಕ್ವಾಲಿಫಿಕೇಶ್ ಬಗ್ಗೆ ಬದಲಾವಣೆ ಮಾಡಲಾಗಿದೆ. ಜತೆಗೆ, ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಠ್ಯವನ್ನು ಮರುರೂಪಿಸಲಾಗುತ್ತಿದೆ. ಇದಕ್ಕಾಗಿ ಹೆಚ್ಚುವರಿಯಾಗಿ ಯಾವುದೇ ರೀತಿಯ ಹಣಕಾಸಿನ ಹೊರೆ ಸರಕಾರದ ಮೇಲೆ ಬೀಳುತ್ತಿಲ್ಲ ಎಂದರು ಉಪ ಮುಖ್ಯಮಂತ್ರಿಗಳು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಸಭೆಯಲ್ಲಿದ್ದ ಎಲ್ಲ ಸದಸ್ಯರು ಪಕ್ಷಬೇಧವಿಲ್ಲದೆ ಬೆಂಬಲ ಸೂಚಿಸಿದ್ದಾರೆ. ಮೂರು ದಶಕಗಳಿಗೂ ಮಿಕ್ಕಿ ಹಳೆಯದಾದ, ಪ್ರಸಕ್ತ ಸಂದರ್ಭಕ್ಕೆ ಸೂಕ್ತವಲ್ಲದ ಶಿಕ್ಷಣ ನೀತಿಯಿಂದ ಯಾವುದೇ ಪ್ರಯೋಜವಿಲ್ಲ. ಹೊಸ ನೀತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶಕ್ತಿ ತುಂಬಬಲ್ಲ ಅಂಶಗಳಿವೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು.
ಇನ್ನು, ರಾಜ್ಯದಲ್ಲಿ ಈಗಾಗಲೇ ಉನ್ನತ ಶಿಕ್ಷಣ ಪರಿಷತ್ ಇದೆ. ಅದರ ಜತೆಗೆ, ಪ್ರಾಥಮಿಕ ಶಿಕ್ಷಣ ಪರಿಷತ್ ಸ್ಥಾಪನೆ ಮಾಡುವ ಸರಕಾರದ ಪ್ರಯತ್ನಕ್ಕೆ ಒಕ್ಕೊರಲ ಬೆಂಬಲ ಸೂಚಿಸಿದರು. ಶಿಕ್ಷಣ ಕ್ಷೇತ್ರಕ್ಕೆ ಪೂರಕವಾದ ಮೂರು ಹೊಸ ಕಾನೂನುಗಳನ್ನು ಜಾರಿಗೆ ತರಬೇಕಿದೆ ಹಾಗೂ ಶಿಕ್ಷಣ ನೀತಿ ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಆದಷ್ಟು ಬೇಗ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.
ಸಭೆಯಲ್ಲಿ ಪರಿಷತ್ ಸದಸ್ಯರಾದ ಪುಟ್ಟಣ್ಣ, ಮರಿತಿಬ್ಬೇಗೌಡ, ವೈ.ಎ.ನಾರಾಯಣ ಸ್ವಾಮಿ, ಅ.ದೇವೇಗೌಡ, ಬೋಜೇಗೌಡ, ಚಿದಾನಂದ ಗೌಡ, ಅರುಣ್ ಶಹಾಪೂರ, ಸುಶೀಲ್ ನಮೋಶಿ, ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪೆÇ್ರ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.