ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿರುವುದು ಸರಿಯಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿಸೂರ್ಯ ಹೇಳಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿರುವ ಎಲ್ಲ ಜಾತಿ, ಎಲ್ಲ ಸಮುದಾಯದ ಎಳಿಗೆಗೆ ಬಿಜೆಪಿ ಸರಕಾರದ ಆದ್ಯ ಕರ್ತವ್ಯವಾಗಿದೆ. ಈ ದೃಷ್ಟಿಯಿಂದ ಸಿಎಂ ಯಡಿಯೂರಪ್ಪ ಮರಾಠಾ ಪ್ರಾಧಿಕಾರ ರಚನೆ ಮಾಡಿದ್ದಾರೆ ಎಂದು ತೇಜಸ್ವಿಸೂರ್ಯ ಹೇಳಿದರು.
ಕರ್ನಾಟಕದಲ್ಲಿ ಕನ್ನಡ ಮಾತನಾಡುವ ಮರಾಠಿಗರಿದ್ದಾರೆ ಅಂತಾ ಬಹಳಷ್ಟು ಜನರಿಗೆ ಗೊತ್ತಿಲ್ಲ. ಆರು ಕೋಟಿ ಕನ್ನಡಿಗರ ಅಭಿವೃದ್ಧಿ ಕರ್ನಾಟಕ ಸರ್ಕಾರದ ಜವಾಬ್ದಾರಿಯಾಗಿದ್ದು, ಎಲ್ಲ ಜಾತಿ, ಎಲ್ಲ ಸಮುದಾಯದ ಏಳ್ಗೆ ಬಿಜೆಪಿ ಸರ್ಕಾರದ ಆದ್ಯ ಕರ್ತವ್ಯ. ಹೀಗಾಗಿ ಸಿಎಂ ಯಡಿಯೂರಪ್ಪನವರು ಮಾರಾಠಾ ಪ್ರಾಧಿಕಾರ ರಚನೆ ಮಾಡಿದ್ದಾರೆ ಎಂದರು.
ಕರ್ನಾಟಕ ಬಂದ್ ಗೆ ಕರೆ ನೀಡಿರುವುದು ಸರಿಯಲ್ಲ -ತೇಜಸ್ವಿ ಸೂರ್ಯ

