ಬೆಳಗಾವಿ: ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಹೇರುವ ಬಗ್ಗೆ ಇನ್ನು ತಿರ್ಮಾನವಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗೃಹ ಸಚಿವರು ಮಾತನಾಡಿದರು.
ಸಾರ್ವಜಕವಾಗಿ ಜಾಗೃತೆ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಕೊರೊನಾ ಸೋಂಕು ಹೆಚ್ಚಾಗುವುದನ್ನು ತಡೆಯುವ ನಿಟ್ಟಿನಲ್ಲಿ ಕರ್ಪ್ಯೂ ಹೇರುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಕರ್ಪ್ಯೂ ಹಾಕುವ ಬಗ್ಗೆ ಇನ್ನು ನಿರ್ಧಾರ ಆಗಿಲ್ಲ. ಆರೋಗ್ಯ ಸಚಿವರು ಈ ಬಗ್ಗೆ ಮಾಹಿತಿ ಪಡೆದು ನಂತರ ಅದರ ಬಗ್ಗೆ ತಿರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಅಲ್ಲದೆ ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿ ವಿನಯ ಕುಲಕರ್ಣಿ ಅವರಿಗೆ ರಾಜ್ಯಾಥಿತಿ ನೀಡಲಾಗುತ್ತಿದೆ. ಮನೆಯ ಊಟವನ್ನು ನೀಡಲಾಗುತ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಅದರ ಕುರಿತು ಹಿರಿಯ ಪೆÇಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದರು.
ಹೊಸ ವರ್ಷಾಚರಣೆಗೆ ರಾತ್ರಿ ಕರ್ಪ್ಯೂ ಬಗ್ಗೆ ತಿರ್ಮಾನವಾಗಿಲ್ಲ -ಗೃಹ ಸಚಿವ ಬೊಮ್ಮಾಯಿ

