ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳ ಕರೆ ನೀಡಿದ್ದ ಕರ್ನಾಟಕ ಬಂದ್ ರಾಜ್ಯದಾದ್ಯಂತ ಸಂಪೂರ್ಣ ವಿಫಲವಾಗಿದೆ.
ರಾಜ್ಯ ರಾಜಧಾನಿ ಬೆಂಗಳೈರು ಹೊರತುಪಡಿಸಿದರೆ ಬಂದ್ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿಲ್ಲ.
ರಾಜ್ಯದಾದ್ಯಂತ ಶನಿವಾರದ ಬಂದ್ ಗೆ ಕನ್ನಡ ಪರ ಕೆಲ ಸಂಘಟನೆಗಳು ತಮ್ಮ ಬೆಂಬಲ ಸೂಚಿಸಿದ್ದರೆ ವ್ಯಾಪಾರಿಗಳು, ಹೊಟೇಲ್ ಉದ್ಯಮದವರು ಆಟೋ, ಕಾರ್, ಪೆಟ್ರೋಲ್ ಬಂಕ್ ಗಳವರು ತಮ್ಮ ಸಂಪೂರ್ಣ ಬೆಂಬಲ ಸೂಚಿಸಿಲ್ಲ.
ಬೆಂಗಳೂರಿನ ಟೌನ್ ಹಾಲ್ ಬಳಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತಯರು ಪ್ರತಿಭಟನಾ ರ್ಯಾಲಿಗೆ ಮುಂದಾಗಿದ್ದು ಈ ವೇಳೆ ಪೆÇಲೀಸರು ವಾಟಾಳ್ ನಾಗರಾಜ್, ಸಾ.ರಾ. ಗೋವಿಂದು ಸೇರಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕರವೇ ನಾರಾಯಣಗೌಡ ಮತ್ತವರ ಬಣದ ಕಾರ್ಯಕರ್ತರನ್ನು
ಮೌರ್ಯ ಸರ್ಕಲ್ ಬಳಿ ಪೆÇಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಟೌನ್‍ಹಾಲ್ ನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪೆÇಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಹಲವು ಕಾರ್ಯಕರ್ತರನ್ನು ಪೆÇಲೀಸರು ವಶಕ್ಕೆ ಪಡೆದರು.
ಹೊಸೂರು ರಸ್ತೆಯ ಹಳೇ ಚಂದಾಪುರ ಬಳಿ ಡಿಪೆÇೀ ನಂ 32ರ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಚಿತ್ರದುರ್ಗದ ಗಾಂಧಿ ವೃತ್ತದ ಬಳಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ.
ಇಂದಿನ ಕರ್ನಾಟಕ ಬಂದ್ ಅಂಗವಾಗಿ ಮುಳಗುಂದದಲ್ಲಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮುಖಕ್ಕೆ ಕಪ್ಪುಪಟ್ಟಿ ಧರಿಸಿ, ಹಲಗೆ ಬಾರಿಸುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.
ರಾಣಿ ಚೆನ್ನಮ್ಮ ವೃತ್ತದಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಬಸವರಾಜ ಪಾಟೀಲ ಯತ್ನಾಳ್ ವಿರುದ್ಧ ಧಿಕ್ಕಾರ ಕೂಗಿದರು.
ಗದಗ, ಮೈಸೂರು, ಚಾಮರಾಜನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯದ ಹಲವೆಡೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಕನ್ನಡಿಗರನ್ನ ತುಳಿದು ಬೇರೆಯವರಿಗೆ ಪಟ್ಟ: ಪ್ರತಿಭಟನೆ ನಡೆಸಲಾಗುತ್ತಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, 25 ಸಾವಿರ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನ ಬಂಧಿಸಿದ್ದಾರೆ. ಪೆÇಲೀಸರು ಮಫ್ತಿಯಲ್ಲಿ ಬಂದು ಬಂಧಿಸಿದ್ದಾರೆ. ಆದರೂ ಬಂದ್ ಯಶಸ್ವಿಯಾಗಿದೆ ಎಂದು ಹೇಳಿದರು.
ರಾಜ್ಯಕ್ಕೆ ಸಿಎಂ ಯಡಿಯೂರಪ್ಪ ಮೋಸಗಾರ. ಕನ್ನಡಿಗರನ್ನು ತುಳಿದು ಮರಾಠಿ, ತಮಿಳು, ತೆಲುಗುನವರಿಗೆ ಪಟ್ಟ ಕಟ್ಟುತ್ತಿದ್ದಾರೆ. ಯಡಿಯೂರಪ್ಪ ಮಾಡುತ್ತಿರುವ ಮೋಸದಿಂದ ನೋವಾಗಿದೆ ಎಂದರು.
ಜೈಲುಭರೋ ಚಳವಳಿಗಾಗಿ ಬುಧವಾರ ಸಭೆ ಕರೆದಿದ್ದೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

