ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಗಾಂಧಿ ಕುಟುಂಬ ಬಿಟ್ಟು ಬೇರೆ ಯಾರನ್ನೂ ಬೆಳೆಸಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಭಾನುವಾರ ಜಗದೀಶ್ ಶೆಟ್ಟರ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕಾಂಗ್ರೆಸ್ ನಂಬಿ ಮೋಸ ಹೋಗಿರುವುದಾಗಿ ಕುಮಾರಸ್ವಾಮಿಯವರು ಹೇಳಿದ್ದು ಸರಿಯಾಗಿದೆ ಎಂದ ಅವರು ಕುಮಾರಸ್ವಾಮಿಯವರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆಂದರು.
ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿಯೇ ಇತರ ಎಲ್ಲಾ ಪಕ್ಷಗಳು ಹುಟ್ಟಿಕೊಂಡಿವೆ ಬಿಜೆಪಿ ಮತ್ತು ಜೆಡಿಎಸ್‍ದು ನ್ಯಾಚ್ಯುರಲ್ ಅಲೈಯನ್ಸ್ ಎಂದರು.
ಸಭಾಪತಿ ಕೆಳಗಿಳಿಸಲು ಜೆಡಿಎಸ್ ನಮ್ಮ ಜೊತೆಗೆ ಕೈಜೋಡಿಸಿದರೆ ಒಳ್ಳೆಯದು ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಜೆಡಿಎಸ್ ನಮಗೆ ಬೆಂಬಲ ಕೊಟ್ಟರೆ ಸ್ವಾಗತವಿದೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಸಚಿವ ಸಂಪುಟ ವಿಸ್ತರಣೆ ವಿಚಾರ ವರಿಷ್ಠರಿಗೆ ಬಿಟ್ಟದ್ದು ಎಂದು ತಿಳಿಸಿದರು.
ಬೆಳಗಾವಿ ಅಭ್ಯರ್ಥಿ ಬಗ್ಗೆ ಈವರೆಗೆ ಚರ್ಚೆಯಾಗಿಲ್ಲ ಎಂದು ಹೇಳಿದ ಅವರು ನಾನು ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಅನ್ನೋದು ಕೇವಲ ಊಹಾಪೆÇೀಹ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಗಾಂಧಿ ಕುಟುಂಬ ಬಿಟ್ಟು ಬೇರೆ ಯಾರನ್ನೂ ಬೆಳೆಸಿಲ್ಲ -ಸಚಿವ ಜಗದೀಶ್ ಶೆಟ್ಟರ್

