ನವದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಗುರುವಾರ ನೂತನ ಸಂಸತ್ ಭವನಕ್ಕೆ ಶಿಲಾನ್ಯಾಸ ಪೂಜೆ ನೆರವೇರಿಸಿದರು. ದೆಹಲಿಯ ಸಂಸತ್ತು ಭವನ ಆವರಣದಲ್ಲಿಯೇ ನೂತನ ಸಂಸತ್ತು ಭವನ ತಲೆಯೆತ್ತಲಿದೆ.
ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಯೋಜನೆಯ ಗುತ್ತಿಗೆ ವಹಿಸಿಕೊಂಡಿರುವ ಟಾಟಾ ಟ್ರಸ್ಟ್ ಅಧ್ಯಕ್ಷ ರತನ್ ಟಾಟಾ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಸಚಿವರು, ನಾಯಕರು, ಹಲವು ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

