ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ -ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಸಂಭಾವ್ಯ 2ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37.72 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಕೋವಿಡ್ ಟಾಸ್ಕ್ ಫೆÇೀರ್ಸ್ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಟಾಸ್ಕ್ ಫೆÇೀರ್ಸ್‍ನ ಹೊಸ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ರೆಮಿಡಿಸ್ವಿರ್ ಔಷಧಿ 1,800 ರೂ.ಗೆ ಸರ್ಕಾರಕ್ಕೆ ದೊರೆಯುತ್ತಿದೆ. ಕೆಲ ಖಾಸಗಿ ಆಸ್ಪತ್ರೆಗಳು ಈ ಔಷಧಿಗೆ ಹೆಚ್ಚು ದರ ವಿಧಿಸುತ್ತಿರುವ ಬಗ್ಗೆ ದೂರು ಬಂದಿದೆ. 2 ಸಾವಿರ ರೂ.ಗಿಂತ ಹೆಚ್ಚಿನ ದರ ವಿಧಿಸಿದರೆ ಕೆಪಿಎಂಇ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಸೇರಿದಂತೆ 10 ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಕುರಿತು ಮಾಹಿತಿ ನೀಡಿದ ಸಚಿವರು, ಕೋವಿಡ್ 2ನೇ ಅಲೆಯನ್ನು ಪರಿಗಣಿಸಿ, 10 ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಗುರಿ ನಿಗದಿಪಡಿಸಲಾಗಿದೆ. ಈ ತಿಂಗಳು ಹಾಗೂ ಮುಂದಿನ ತಿಂಗಳಲ್ಲಿ ಸಭೆ, ಸಮಾರಂಭ, ಹೊಸ ವರ್ಷಾಚರಣೆಗೆ ಕಡಿವಾಣ ಹಾಕಲು ಸೂಚಿಸಲಾಗಿದೆ. ಡಿ. 20ರಿಂದ ಜನವರಿ ಎರಡನೇ ವಾರದವರೆಗೂ ಧಾರ್ಮಿಕ, ಸಾಮಾಜಿಕ ಸಮಾರಂಭಗಳಲ್ಲಿ ಅತಿ ಕಡಿಮೆ ಜನರು ಸೇರಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಲಸಿಕೆ ವಿತರಣೆಗೆ ಸಿದ್ಧತೆಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ ಲಸಿಕೆ ಸಂಗ್ರಹ, ವಿತರಣೆಗೆ ಮಾಡಿಕೊಂಡ ಸಿದ್ಧತೆ ಬಗ್ಗೆ ಮಾಹಿತಿ ಅಪ್ ಲೋಡ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.
ಹೊಸ ವರ್ಷದಲ್ಲಿ ಶೋಕಾಚರಣೆ ಮಾಡಬೇಕಿದೆಯೇ ಹೊರತು ಸಂಭ್ರಮಾಚರಣೆ ಅಲ್ಲ. ಅನೇಕರು ಜೀವ ಕಳೆದುಕೊಂಡಿದ್ದಾರೆ. ಮತ್ತೆ ಕೆಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಭಾರತೀಯರಿಗೆ ಯುಗಾದಿ ಹೊಸ ವರ್ಷ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಕಂದಾಯ ಸಚಿವ ಆರ್.ಅಶೋಕ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಉಪಸ್ಥಿತರಿದ್ದರು.