ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಬಿಕ್ಕಟ್ಟುಗಳನ್ನು ಪರಿಹರಿಸುವುದು ಎಂದರೆ ಸದನದಲ್ಲಿ ಕುಳಿತು ರೋಮಾಂಚನಕಾರಿ ವಿಡಿಯೋ ವೀಕ್ಷಿಸಿದಂತಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.
ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಸಾರಿಗೆ ನೌಕರರ ಮುಷ್ಕರದ ಕುರಿತು ಭಾನುವಾರ ಟ್ವೀಟ್ ಮಾಡಲಾಗಿದ್ದು, ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತು ಹೋಗಿದೆ. ಪ್ರಯಾಣಿಕರ ಪರದಾಟ, ಅನಾನುಭವಿ ಖಾಸಗಿ ಚಾಲಕರ ಪೀಕಲಾಟ, ಸರ್ಕಾರದ ಮೊಂಡು ಹಠ, ಖಾಸಗಿ ಬಸ್ ಮಾಲೀಕರ ನಿರಾಕರಣೆಯ ನಡುವೆ ಜನರು ಸಿಲುಕಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೇ, ಬಿಕ್ಕಟ್ಟುಗಳನ್ನ ನಿರ್ವಹಿಸುವುದೆಂದರೆ ಸದನದಲ್ಲಿ ಕೂತು ಮೊಬೈಲ್ ನಲ್ಲಿ “ರೋಮಾಂಚನದ” ಚಿತ್ರ ವೀಕ್ಷಿಸಿದಂತಲ್ಲ ಎಂದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಟ್ವೀಟ್ ಮೂಲಕ ಟಾಂಗ್ ನೀಡಲಾಗಿದೆ.

