ಬೆಂಗಳೂರು: ಕೊನೆಗೂ ಸಾರಿಗೆ ನೌಕರರ ಮುಷ್ಕರ ಅಂತ್ಯಗೊಂಡಿದೆ.
ಸರ್ಕಾರಕ್ಕೆ ಮೂರು ತಿಂಗಳು ಗಡುವು ನೀಡುತ್ತೇವೆ. ಮೂರು ತಿಂಗಳಲ್ಲಿ ಬೇಡಿಕೆ ಈಡೇರದಿದ್ದರೇ ಮತ್ತೆ ಪ್ರತಿಭಟನೆ ನಡೆಸುತ್ತೇವೆ. ಮಂಗಳವಾರದಿಂದ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗುತ್ತಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಸರ್ಕಾರದ ಪ್ರತಿನಿಧಿಯಾಗಿ ಪ್ರತಿಭಟನಾನಿರತ ಸ್ಥಳ ಫ್ರೀಡಂ ಪಾರ್ಕ್ ಗೆ ಬಂದಿದ್ದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ 10 ಬೇಡಿಕೆಗಳಲ್ಲಿ 9 ಬೇಡಿಕೆ ಈಡೇರಿಸಿದ ಬಗ್ಗೆ ಲಿಖಿತ ಪತ್ರ ನೀಡಿದ್ದರು.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ರಾಜ್ಯ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಕೊನೆಯಾಗಿದೆ.
ಕೊನೆಗೂ ಅಂತ್ಯಗೊಂಡ ಸಾರಿಗೆ ನೌಕರರ ಮುಷ್ಕರ

