ವಿದ್ಯಾಗಮ ಯೋಜನೆ ಮತ್ತೆ ಆರಂಭ -ಸಚಿವ ಸುರೇಶ್ ಕುಮಾರ್

ಬೆಂಗಳೂರು: ವಿದ್ಯಾಗಮ ಯೋಜನೆಯನ್ನು ಮತ್ತೆ ಆರಂಭಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿಯೂ ವಿದ್ಯಾಗಮ ಕಾರ್ಯಕ್ರಮವನ್ನು ನಡೆಸಲಾಗುವುದೆಂದರು.
ಪೆÇೀಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಇದು ಶಾಲಾರಂಭವಲ್ಲ ಎಂದು ಸಚಿವರು ಹೇಳಿದರು.
ವಿದ್ಯಾಗಮ ಗ್ರಾಮೀಣಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು.
ಕೋವಿಡ್ ಸೋಂಕಿನಿಂದ ಸ್ಥಗಿತಗೊಂಡಿದ್ದ ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.