ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ೭೨ ಗಂಟೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡುಗು, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಡಿ.೧೭ರಿಂದ ಡಿ.೧೯ ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

