ಜನವರಿಯಲ್ಲಿ ಶಾಲೆ-ಕಾಲೇಜು ಆರಂಭ -ಸಿಎಂ ಬಿ ಎಸ್ ವೈ

ಬೆಂಗಳೂರು: 2021ರ ಜನವರಿ 1ರಿಂದ ಶಾಲಾ-ಕಾಲೇಜು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
2021ರ ಜನವರಿ 1ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಲಿದ್ದು, 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಪ್ರಾರಂಭವಾಗಲಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶಾಲೆ-ಕಾಲೇಜುಗಳ ಪ್ರಾರಂಭ ಕುರಿತು ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಜನವರಿ 1ರಂದು 10 ಮತ್ತು ಪಿಯುಸಿ ತರಗತಿ ಪ್ರಾರಂಭಿಸಿ 15 ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿಗಳನ್ನು ಮುಂದಿನ ದಿನಗಳಲ್ಲಿ ಪ್ರಾರಂಭಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಕೊರೋನಾ ಹಿನ್ನೆಲೆಯಲ್ಲಿ ಲಾಕ್‍ಡೌನ್‍ನಿಂದಾಗಿ ಮಾರ್ಚ್ ತಿಂಗಳಿಂದ ಮುಚ್ಚಲಾಗಿದ್ದ ಶಾಲಾ-ಕಾಲೇಜುಗಳ ಆರಂಭಕ್ಕೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ.
ಜನವರಿ 1ರಿಂದ ಶಾಲೆಗಳು ಆರಂಭವಾದರೂ ಮಕ್ಕಳು ಶಾಲೆಗೆ ಬರಲೇಬೇಕೆಂದು ಕಡ್ಡಾಯವಿಲ್ಲ. ಆದರೆ, ದಾಖಲಾತಿ ಮಾಡಿಸಿಕೊಳ್ಳುವುದು ಕಡ್ಡಾಯ. ಮಕ್ಕಳು ಪೆÇೀಷಕರ ಅನುಮತಿ ಪಡೆದು ಶಾಲೆಗಳಿಗೆ ಬರಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.