ಮೈತ್ರಿ ಸರ್ಕಾರ ಪತನಕ್ಕೆ ಸಿದ್ದು ಮತ್ತು ಹೆಚ್ ಡಿಕೆ ಕಾರಣ -ಶಾಸಕ ಜಿ.ಟಿ.ಡಿ.

ಮೈಸೂರು: ಕರ್ನಾಟಕದಲ್ಲಿನ ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರು ಮಾಜಿ ಮುಖ್ಯಮಂತ್ರಿಗಳೇ ಕಾರಣ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ನಗರದಲ್ಲಿ ಭಾನುವಾರ ಜಿಟಿಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಮೈತ್ರಿ ಸರ್ಕಾರ ಪತನಕ್ಕೆ ಕಾರಣ ಎಂದು ಜಿ.ಟಿ.ದೇವೇಗೌಡ ದೂರಿದರು.
ಮೈತ್ರಿ ಸರ್ಕಾರ ಬೀಳುತ್ತೆ ಅಂತ ಗೊತ್ತಿತ್ತು. ಹಾಗಿದ್ದರೂ ಕುಮಾರಸ್ವಾಮಿ ಅಮೇರಿಕಾಕ್ಕೆ ಹೋಗಿ ಕುಳಿತುಕೊಂಡರು. ಶಾಸಕರು ಬಿಟ್ಟು ಹೋಗುತ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು ಎಂದು ಜಿಟಿಡಿ ಹೇಳಿದರು.
ಈ ಇಬ್ಬರೂ ಮನಸ್ಸು ಮಾಡಿದ್ದರೆ ಮೈತ್ರಿ ಸರ್ಕಾರ ಪತನವಾಗುವುದನ್ನು ತಡೆಯಬಹುದಿತ್ತು. ಆದರೆ, ತಡೆಯುವ ಪ್ರಯತ್ನವನ್ನು ಇವರು ಮಾಡಲಿಲ್ಲ. ಆದ್ದರಿಂದ ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣರಾಗಿದ್ದಾರೆ ಎಂದರು ಜಿಟಿಡಿ.